ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ಮಾಣದ 'ಶಿವಮ್ಮ' ಚಿತ್ರ ಪ್ರದರ್ಶನ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ ‘ಶಿವಮ್ಮ’. ಈ ಚಿತ್ರ ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಿದೆ. ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ ‘ಶಿವಮ್ಮ’. ಈ ಚಿತ್ರ ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಿದೆ.ಭಾರತದ ಪ್ರತಿಷ್ಠಿತ ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನವನ್ನು ಕಾಣುತ್ತಿದೆ.ಶಿವಮ್ಮ ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದ್ದು, ಊರಿನ ಗ್ರಾಮಸ್ಥರೇ ಮುಖ್ಯ ತಾರಾಗಣದಲ್ಲಿದ್ದಾರೆ.ಇದನ್ನೂ ಓದಿ: ಸದ್ಯಕ್ಕೆ ನನ್ನ ಗಮನ ಕೇವಲ ಕಾಂತಾರ ಪ್ರೀಕ್ವೆಲ್ ಮೇಲೆ: ಅಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಗುಟ್ಟು ಬಿಡದ ರಿಷಬ್ ಶೆಟ್ಟಿತನ್ನ ಕುಟುಂಬದ ಉನ್ನತಿಗೋಸ್ಕರ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರದಲ್ಲಿ ತೊಡಗುವ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ಹಳ್ಳಿ ಹೆಣ್ಣುಮಗಳ ಕಥೆಯಾಗಿದೆ.ಇರಾನ್‌ನಲ್ಲಿ ನಡೆದ ಫಜರ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಮೊದಲ ಕನ್ನಡ ಚಿತ್ರ ಇದಾಗಿದ್ದು, ಚಿತ್ರವು ಈಗಾಗಲೇ ಐದು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಚಿತ್ರದ ಟ್ರೈಲರ್ ಅಕ್ಟೋಬರ್ 10ರಂದು ರಿಷಬ್ ಶೆಟ್ಟಿ ಫಿಲಮ್ಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಆಗಿದೆ. ಸಿನಿಮಾವನ್ನು ಜೈಶಂಕರ್ ಆರ್ಯರ್ ನಿರ್ದೇಶನ ಮಾಡಿದ್ದು, ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.