ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ, ಪ್ರಾಣಾಪಾಯದಿಂದ ಪಾರು ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ ( ) ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದ್ದು, ಕೂದಲೆಳೆ ಅಂತರದಲ್ಲಿ ನಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈ: ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ ( ) ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದ್ದು, ಕೂದಲೆಳೆ ಅಂತರದಲ್ಲಿ ನಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವಿಮಾನ ತುರ್ತು ಭೂಸ್ಪರ್ಶ ಮಾಡಿದ ವೇಳೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ ಘಟನೆ ನಟಿ ಮತ್ತು ಸಹ ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿತ್ತು. ಸದ್ಯ ರಶ್ಮಿಕಾ ಸುರಕ್ಷಿತರಾಗಿದ್ದಾರೆ. ಅವರು ವಿಮಾನದಲ್ಲಿ ಕುಳಿತಿರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಆತಂಕದ ಕ್ಷಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಈ ಅನುಭವವನ್ನು ಹಂಚಿಕೊಂಡಿರು ಅವರು, ʼʼಇಂದು ಸಾವಿನಿಂದ ತಪ್ಪಿಸಿಕೊಂಡಿದ್ದೇವೆʼʼ ಎಂದು ಬರೆದುಕೊಂಡಿದ್ದಾರೆ.ರಶ್ಮಿಕಾ ಜತೆ ಈ ವೇಳೆ ನಟಿ ಶ್ರದ್ಧಾ ದಾಸ್ ಕೂಡ ಇದ್ದರು.ಶನಿವಾರ ರಶ್ಮಿಕಾ ಸಂಚರಿಸುತ್ತಿದ್ದ ಏರ್‌ ವಿಸ್ತಾರ ( ) ವಿಮಾನವು ಮುಂಬೈಯಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿತ್ತು. ಮುಂಬೈ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ 30 ನಿಮಿಷಗಳ ನಂತರ ವಿಮಾನ ಮತ್ತೆ ಮುಂಬೈಗೆ ಮರಳಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.