ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ನಾಳೆ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ಸಿದ್ದತೆ ಮಾಡಲಾಗುತ್ತಿದೆ.1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್ಕುಮಾರ್, ವಿಷ್ಣುವರ್ಧನ್ ಮುಂತಾದವರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.: ಕನ್ನಡ ಚಿತ್ರರಂಗ ಧ್ರುವತಾರೆ 'ಲೀಲಾವತಿ' ಅವರ ಅಪರೂಪದ ಚಿತ್ರಗಳುಲೀಲಾವತಿ ಅವರು ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು, ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದು ಕನ್ನಡದ ಕಂದ ಚಿತ್ರಕ್ಕೆ ಫಿಲ್ಮ್ ಫೇರ್ ಪ್ರಶಸ್ತಿ ಕೂಡ ಸಿಕ್ಕಿತ್ತು. ಜೀವಮಾನ ಸಾಧನೆಗಾಗಿ 1999ರಲ್ಲಿ ಲೀಲಾವತಿ ಅವರು ಡಾ. ರಾಜ್ಕುಮಾರ್ ಪ್ರಶಸ್ತಿ ಪಡೆದರು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿತ್ತು.1953ರಲ್ಲಿ ಬಿಡುಗಡೆಯಾಗಿದ್ದ 'ಚಂಚಲ ಕುಮಾರಿ' ಚಿತ್ರದ ಮೂಲಕ ಲೀಲಾವತಿ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ಕನ್ನಡ, ತೆಲುಗು, ಮಲಯಾಳಂ, ತುಳು ಮುಂತಾದ ಭಾಷೆಗಳಲ್ಲಿ ನಟಿಸಿ ಲೀಲಾವತಿ ಸೈ ಎನಿಸಿಕೊಂಡರು. 'ಮದುವೆ ಮಾಡಿನೋಡು' ಮತ್ತು 'ಸಂತ ತುಕಾರಾಮ್' ಸಿನಿಮಾಗಳಿಗೆ ಲೀಲಾವತಿ ಅವರು 2 ರಾಷ್ಟ್ರ ಪ್ರಶಸ್ತಿ ಪಡೆದಿದ್ದರು.ಇದನ್ನೂ ಓದಿ: ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ, ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಿಎಂ ಸಿದ್ದರಾಮಯ್ಯಲೀಲಾವತಿ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ… ../fzTDa6l1eg