ಬಾಲಿವುಡ್ ನಟ ಸಂಜಯ್ ದತ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್! ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮುಂಬೈ: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಕಳೆದ ವಾರ ನಟ ಸಂಜಯ್ ದತ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಸೇರಿಸಿದ ನಂತರ ಅಲ್ಲೇ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಲಾಗಿ ಅದರ ವರದಿ ನೆಗೆಟಿವ್ ಬಂದಿತ್ತು. ಬಳಿಕ ಸಂಜಯ್ ದತ್ ಅವರ ಸ್ವಾಬ್ ಪರೀಕ್ಷೆಯಲ್ಲೂ ಅವರಿಗೆ ನೆಗೆಟಿವ್ ಬಂದಿತ್ತು. ಹೀಗಾಗಿ ಅವರನ್ನು ಸಾಮಾನ್ಯ ವಿಶೇಷ ಕೊಠಡಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ( ) 8 : , 8 #COVID19 ../jxSlBANOZ5Just ’ . ’ & -19 . & , & , . &