ಕನ್ನಡದ ಬದ್ಮಾಷ್ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡಲಿದ್ದಾರೆ ಸಲ್ಮಾನ್ ಖಾನ್ ? ಬಾಲಿವುಡ್ ನಟ ಸಲ್ಮಾನ್ ಖಾನ್ ಕನ್ನಡ ಚಿತ್ರವೊಂದನ್ನು ಹಿಂದಿ ಭಾಷೆಗೆ ರಿಮೇಕ್ ಮಾಡಲಿದ್ದಾರೆ ಎಂಬ ಸುದ್ದಿ ಗಾಂಧಿ ನಗರದ ತುಂಬೆಲ್ಲಾ ಹರಿದಾಡುತ್ತಿದೆ.... ಬಾಲಿವುಡ್ ನಟ ಸಲ್ಮಾನ್ ಖಾನ್ ಕನ್ನಡ ಚಿತ್ರವೊಂದನ್ನು ಹಿಂದಿ ಭಾಷೆಗೆ ರಿಮೇಕ್ ಮಾಡಲಿದ್ದಾರೆ ಎಂಬ ಸುದ್ದಿ ಗಾಂಧಿ ನಗರದ ತುಂಬೆಲ್ಲಾ ಹರಿದಾಡುತ್ತಿದೆ. ಆಕಾಶ್ ಶ್ರೀ ವಾತ್ಸವ್ ನಿರ್ದೇಶಿಸರುವ ಬದ್ಮಾಷ್ ಚಿತ್ರದ ಟೀಸರ್ ಸಲ್ಮಾನ್ ಖಾನ್ ಗೆ ಇಷ್ಟವಾಗಿದೆಯಂತೆ. ಹೀಗಾಗಿ ಪೂರ್ತಿ ಸಿನಿಮಾ ನೋಡಿದ ನಂತರ ರಿಮೇಕ್ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ನಿರ್ದೇಶಕ ಆಕಾಶ್ ಶ್ರೀವಾತ್ಸವ್ ಹೇಳಿದ್ದಾರೆ. ಶೀಘ್ರದಲ್ಲೇ ಸಲ್ಮಾನ್ ಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಹೇಳಿದ್ದಾರೆ. ಕನ್ನಡದ ಬದ್ಮಾಷ್ ಚಿತ್ರದಲ್ಲಿ ಧನಂಜಯ ಮತ್ತು ಸಂಚಿತಾ ಶೆಟ್ಟಿ ಅಭಿನಯಿಸಿದ್ದಾರೆ. ಇನ್ನು ಮತ್ತೊಬ್ಬ ನಿರ್ದೇಶಕ ಸಂಜಯ್ ಕುಮಾರ್ ಹೂಡಾ ಅವರು ಕೂಡಾ ಬದ್ಮಾಷ್ ಚಿತ್ರವನ್ನ ರಿಮೇಕ್ ಮಾಡುವುದಾಗಿ ಹೇಳಿದ್ದರು. ಆದರೆ ಈ ವರೆಗೂ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ ಎಂದು ಆಕಾಶ್ ಶ್ರೀವಾತ್ಸವ್ ತಿಳಿಸಿದ್ದಾರೆ.