ದೇಶಪ್ರೇಮಿಗಳನ್ನು ಯಾರೂ ಬಗ್ಗುಬಡಿಯಲು ಸಾಧ್ಯವಿಲ್ಲ: ಕಂಗನಾ ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಕೇಂದ್ರ ಸರ್ಕಾರ ಭದ್ರತೆ ನೀಡಿದ್ದು, ಗೃಹ ಸಚಿವ ಅಮಿತ್ ಶಾ ಗೆ ಧನ್ಯವಾದ ತಿಳಿಸಿದ್ದಾರೆ. ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಕೇಂದ್ರ ಸರ್ಕಾರ ಭದ್ರತೆ ನೀಡಿದ್ದು, ಗೃಹ ಸಚಿವ ಅಮಿತ್ ಶಾ ಗೆ ಧನ್ಯವಾದ ತಿಳಿಸಿದ್ದಾರೆ. ಸುಶಾಂತ್ ಸಿಂಗ್ ರಜ್ಪೂತ್ ಅವರ ಸಾವಿನ ನಂತರ ನಟಿ ಕಂಗನಾ ಬಾಲಿವುಡ್ ನಲ್ಲಿ ಡ್ರಗ್ ಸಮಸ್ಯೆ ಬಗ್ಗೆ ಮಾತನಾಡಿದ್ದರು, ಈ ಬಳಿಕ ಅವರಿಗೆ ಬೆದರಿಕೆ ಬಂದಿದ್ದ ಹಿನ್ನೆಲೆಯಲ್ಲಿ ವೈ+ ಶ್ರೇಣಿಯ ಭದ್ರತೆ ಒದಗಿಸಲಾಗಿತ್ತು. ये प्रमाण है की अब किसी देशभक्त आवाज़ को कोई फ़ासीवादी नहीं कुचल सकेगा,मैं @ जी की आभारी हूँ वो चाहते तो हालातों के चलते मुझे कुछ दिन बाद मुंबई जाने की सलाह देते मगर उन्होंने भारत की एक बेटी के वचनों का मान रखा, हमारे स्वाभिमान और आत्मसम्मान की लाज रखी, जय हिंद ://./VSbZMG66LTಈ ಬಗ್ಗೆ ಟ್ವೀಟ್ ಮಾಡಿರುವ ಕಂಗನಾ, ದೇಶಪ್ರೇಮಿಗಳನ್ನು ಯಾರೂ ಬಗ್ಗುಬಡಿಯಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ. ಶಿವಸೇನೆ ಸಂಸದ ಸಂಜಯ್ ರೌತ್ ಅವರೊಂದಿಗೆ ವಾಗ್ವಾದದ ನಡುವೆಯೇ ಕಂಗನಾಗೆ ಭದ್ರತೆ ನೀಡಲಾಗಿದೆ.