ಇರಾ ಖಾನ್-ನೂಪುರ್ ಶಿಖರೆ ಆರತಕ್ಷತೆಯಲ್ಲಿ ಪಾಲ್ಗೊಂಡ ಶಾರುಖ್ ಖಾನ್, ಸಲ್ಮಾನ್ ಖಾನ್, ಸಚಿನ್ ತೆಂಡೂಲ್ಕರ್ ಶಾರುಖ್ ಖಾನ್, ಸಲ್ಮಾನ್ ಖಾನ್, ಸಚಿನ್ ತೆಂಡೂಲ್ಕರ್, ಸೂರ್ಯ ಮತ್ತು ಜೂಹಿ ಚಾವ್ಲಾ ಸೇರಿದಂತೆ ಹಲವಾರು ಪ್ರಸಿದ್ಧ ವ್ಯಕ್ತಿಗಳು ರಂಗಭೂಮಿ ನಿರ್ದೇಶಕಿ ಇರಾ ಖಾನ್ ಮತ್ತು ಸೆಲೆಬ್ರಿಟಿ ಫಿಟ್‌ನೆಸ್ ತರಬೇತುದಾರ ನೂಪುರ್ ಶಿಖರೆ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಂಬೈ: ಶಾರುಖ್ ಖಾನ್, ಸಲ್ಮಾನ್ ಖಾನ್, ಸಚಿನ್ ತೆಂಡೂಲ್ಕರ್, ಸೂರ್ಯ ಮತ್ತು ಜೂಹಿ ಚಾವ್ಲಾ ಸೇರಿದಂತೆ ಹಲವಾರು ಪ್ರಸಿದ್ಧ ವ್ಯಕ್ತಿಗಳು ರಂಗಭೂಮಿ ನಿರ್ದೇಶಕಿ ಇರಾ ಖಾನ್ ಮತ್ತು ಸೆಲೆಬ್ರಿಟಿ ಫಿಟ್‌ನೆಸ್ ತರಬೇತುದಾರ ನೂಪುರ್ ಶಿಖರೆ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಿದ್ದರು.ನಟ ಅಮೀರ್ ಖಾನ್ ಮತ್ತು ನಿರ್ಮಾಪಕಿ ರೀನಾ ದತ್ತಾ ಅವರ ಪುತ್ರಿಯಾದ ಇರಾ ಮತ್ತು ನೂಪುರ್ ಜನವರಿ 8 ರಂದು ರಾಜಸ್ಥಾನದ ಉದಯಪುರದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು.ಆರತಕ್ಷತೆ ಕಾರ್ಯಕ್ರಮಕ್ಕೆ ನಟಿ ರೇಖಾ, ಜಯಾ ಬಚ್ಚನ್, ಹೇಮಾ ಮಾಲಿನಿ, ರಣಬೀರ್ ಕಪೂರ್, ಮಾಧುರಿ ದೀಕ್ಷಿತ್, ಕತ್ರಿನಾ ಕೈಫ್, ಕಂಗನಾ ರನೌತ್, ನಾಗ ಚೈತನ್ಯ, ಅನಿಲ್ ಕಪೂರ್, ಸೋನಾಲಿ ಬೇಂದ್ರೆ, ಫರ್ಹಾನ್ ಅಖ್ತರ್, ಜೋಯಾ ಅಖ್ತರ್, ಸುನಿಧಿ ಚೌಹಾಣ್, ಕಾರ್ತಿಕ್ ಆರ್ಯನ್, ಸುಶ್ಮಿತಾ ಸೇನ್, ಶ್ವೇತಾ ತಿವಾರಿ, ಭೂಮಿ ಪಡ್ನೇಕರ್ ಮತ್ತು ಕಪಿಲ್ ಶರ್ಮಾ ಅವರು ಶನಿವಾರ ಸಂಜೆ ಮುಂಬೈನ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್‌ನಲ್ಲಿ ನಡೆದ ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದರು.ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉದ್ಯಮಿ ದಂಪತಿ ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ ಕೂಡ ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದರು.ಆರತಕ್ಷತೆಗಾಗಿ, ಇರಾ ಕಸೂತಿ ಮಾಡಿದ ಕೆಂಪು ಲೆಹೆಂಗಾವನ್ನು ಧರಿಸಿದ್ದರು ಮತ್ತು ನೂಪುರ್ ಸಂಪೂರ್ಣ ಕಪ್ಪು ಬಣ್ಣದ ಶೇರ್ವಾನಿ ಜಾಕೆಟ್ ಮತ್ತು ಧೋತಿಯನ್ನು ಧರಿಸಿದ್ದರು.ಅಮೀರ್ ಅವರ ಮೊದಲ ಪತ್ನಿ ರೀನಾ ದತ್ತಾ ಅವರ ಇಬ್ಬರು ಮಕ್ಕಳಲ್ಲಿ ಇರಾ ಕಿರಿಯವರು. ಇರಾ ಅವರ ಹಿರಿಯ ಸಹೋದರ ಜುನೈದ್ ಮತ್ತು ಅಮೀರ್ ಖಾನ್ ಅವರ ಮತ್ತೋರ್ವ ಪುತ್ರ ಆಜಾದ್ ರಾವ್ ಖಾನ್ ಕೂಡ ಕಾರ್ಯಕ್ರಮದಲ್ಲಿದ್ದರು.ಮಾನಸಿಕ ಆರೋಗ್ಯ ಬೆಂಬಲ ಸಂಸ್ಥೆಯ ಸಂಸ್ಥಾಪಕಿ ಮತ್ತು ಸಿಇಒ ಕೂಡ ಆಗಿರುವ ಇರಾ, ಈ ಹಿಂದೆ ಜನವರಿ 3 ರಂದು ಮುಂಬೈನ ಉಪನಗರದಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ನೂಪುರ್ ಅವರೊಂದಿಗೆ ವಿವಾಹ ಮಾಡಿಕೊಂಡಿದ್ದರು.ಕಳೆದ ಮೂರು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದ ಇಬ್ಬರು 2023ರ ನವೆಂಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.