ಅಮೀರ್ ಖಾನ್ ಮನೆಗೆಲಸದವರಿಗೆ ಕೋವಿಡ್-19 ಪಾಸಿಟಿವ್ ಬಾಲಿವುಡ್ ನಟ ಅಮೀರ್ ಖಾನ್ ಅವರ ಕೆಲ ಮನೆಗೆಲಸದವರಿಗೆ ಕೊರೋನಾ ಸೋಂಕು ತಗುಲಿದ್ದು, ಹೋಮ್ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಅವರ ಕೆಲ ಮನೆಗೆಲಸದವರಿಗೆ ಕೊರೋನಾ ಸೋಂಕು ತಗುಲಿದ್ದು, ಹೋಮ್ ಕ್ವಾರಂಟೈನ್ ನಲ್ಲಿ ಇಡಲಾಗಿದೆ.ಅಮೀರ್ ಖಾನ್ ಅವರೇ ಈ ವಿಷಯವನ್ನು ಟ್ವೀಟರ್ ನಲ್ಲಿ ತಿಳಿಸಿದ್ದಾರೆ. ಕುಟುಂಬ ವರ್ಗದವರಿಗೆ ಯಾರಿಗೂ ಸೋಂಕು ತಗುಲಿಲ್ಲ. ತಮ್ಮ ತಾಯಿಯನ್ನು ಪರೀಕ್ಷೆಗಾಗಿ ಕರೆದುಕೊಂಡು ಹೋಗುತ್ತಿದ್ದೇನೆ. ಅವರಿಗೆ ನೆಗೆಟಿವ್ ಬರಲಿ ಎಂದು ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದಾರೆ.ಕಟ್ಟಡವನ್ನು ಸೋಂಕು ನಿವಾರಕ ದ್ರಾವಣದಿಂದ ಸ್ವಚ್ಛಗೊಳಿಸಿದ ಬಿಎಂಸಿ ಹಾಗೂ ತಮ್ಮ ಮನೆಗೆಲಸದವರ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿರುವ ಬಿಎಂಸಿಗೆ ಧನ್ಯವಾದ ಹೇಳುವುದಾಗಿ ತಿಳಿಸಿದ್ದಾರೆ.../TATvKCf6gfಮಹಾರಾಷ್ಟ್ರದಲ್ಲಿ ಸೋಮವಾರ 5, 257 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1, 69, 883ಕ್ಕೆ ಏರಿಕೆಯಾಗಿದೆ.