ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ತುತ್ತಾಗಿದ್ದ ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಲಾಗಿದೆ ಎನ್ನಲಾಗಿದೆ. ನವದೆಹಲಿ: ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ತುತ್ತಾಗಿದ್ದ ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಲಾಗಿದೆ ಎನ್ನಲಾಗಿದೆ.ಹಾಸ್ಯನಟ ರಾಜು ಶ್ರೀವಾಸ್ತವ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ವೈದ್ಯರು ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿದ್ದರು. ಇದೀಗ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದ್ದು, ಅವರು ಕ್ಲಿನಿಕಲ್ ಚಿಕಿತ್ಸೆಗೆ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಇದನ್ನೂ ಓದಿ: ಜಿಮ್ ಮಾಡುತ್ತಿದ್ದ ವೇಳೆ ಹಿರಿಯ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು!ರಾಜು ಶ್ರೀವಾಸ್ತವ ಅವರು ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏಮ್ಸ್ ನಿರ್ದೇಶಕರೊಂದಿಗೆ ಫೋನ್ ಮೂಲಕ ಸಂಭಾಷಣೆ ನಡೆಸಿ, ರಾಜು ಅವರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಹಾಸ್ಯನಟ ರಾಜು ಶ್ರೀವಾಸ್ತವ್ ಅವರ ಪತ್ನಿ ಶಿಖಾ ಶ್ರೀವಾಸ್ತವ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.