ದಬಾಂಗ್ ಸ್ಟೈಲ್ ನಲ್ಲಿ ಬಾಲಿವುಡ್ ಗೆ ಸುದೀಪ್ ಮರಳಿ ಎಂಟ್ರಿ! ಬಾಲಿವುಡ್ ನಲ್ಲಿ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರೊಂದಿಗೂ ಸುದೀಪ್ ಅಭಿನಯಿಸಲಿದ್ದಾರೆ. ಸೊಹಾಲಿ ಖಾನ್ ಪ್ರೋಡಕ್ಷನ್ ನಲ್ಲಿ ಮೂಡಿಬರುತ್ತಿರುವ ದಬಾಂಗ್ -3 ಸುದೀಪ್ ಅಭಿನಯಿಸುತ್ತಿದ್ದಾರೆ. ಪ್ರಸ್ತುತ ಚಿತ್ರರಂಗದಲ್ಲಿ ಕಿಚ್ಚ ಸುದೀಪ್ ಅತ್ಯುತ್ತಮ ಸ್ಥಾನದಲ್ಲಿದ್ದಾರೆ. ಕನ್ನಡದ ಮೂರು ಚಿತ್ರಗಳನ್ನು ಹೊರತುಪಡಿಸಿ ತೆಲುಗಿನ ಸೂಪರ್ ಸ್ಟಾರ್ ಚಿರಂಜೀವಿ ಅವರೊಂದಿಗೆ ಸೈರಾ ನರಸಿಂಹ ರೆಡ್ಡಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ತಮಿಳಿನಲ್ಲಿ ಧನುಸ್ ಅವರೊಂದಿಗಿನ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹಾಲಿವುಡ್ ನ ರೈಸನ್ ಚಿತ್ರದಲ್ಲೂ ನಟಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.