ನಟ ಅರ್ಜುನ್‌ ಕಪೂರ್‌ಗೂ ವಕ್ಕರಿಸಿದ ಕೊರೋನಾ! ಬಾಲಿವುಡ್‌ ನಟ ಅರ್ಜುನ್‌ ಕಪೂರ್‌ ಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಅರ್ಜುನ್‌ ತಮ್ಮ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮಾಹಿತಿ ನೀಡಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುವುದಾಗಿ ತಿಳಿಸಿದ್ದಾರೆ. ನವದೆಹಲಿ: ಬಾಲಿವುಡ್‌ ನಟ ಅರ್ಜುನ್‌ ಕಪೂರ್‌ ಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಅರ್ಜುನ್‌ ತಮ್ಮ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮಾಹಿತಿ ನೀಡಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುವುದಾಗಿ ತಿಳಿಸಿದ್ದಾರೆ.ಜೊತೆಗೆ, ತಾವು ಆರೋಗ್ಯವಾಗಿದ್ದು, ಸೋಂಕಿನ ಯಾವುದೇ ಲಕ್ಷಣಗಳಿಲ್ಲ ಎಂದು ಮಾಹಿತಿ ನೀಡಿದ್ದಾರೆ."ನನಗೆ ಕೋವಿಡ್‌ ಸೋಂಕು ದೃಢಪಟ್ಟಿದೆ ಎಂದು ನಿಮಗೆಲ್ಲಾ ತಿಳಿಸುವುದು ನನ್ನ ಕರ್ತವ್ಯ. ನಾನು ಆರಾಮಾಗಿದ್ದೇನೆ ಮತ್ತು ಯಾವುದೇ ಸೋಂಕಿನ ಲಕ್ಷಣಗಳಿಲ್ಲ. ವೈದ್ಯರು ಮತ್ತು ಅಧಿಕಾರಿಗಳ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್‌ ಆಗಲಿದ್ದೇನೆ. ನಿಮ್ಮೆಲ್ಲರ ಬೆಂಬಲಕ್ಕಾಗಿ ಮುಂಚಿತವಾಗಿ ಧನ್ಯವಾದ ಹೇಳುತ್ತಿದ್ದೇನೆ ಮತ್ತು ನನ್ನ ಆರೋಗ್ಯದ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದ್ದೇನೆ. ಇವು ವಿಶೇಷ ಮತ್ತು ಅನಿರೀಕ್ಷಿತ ಸಮಯವಾಗಿದ್ದು, ಎಲ್ಲಾ ಮಾನವೀಯ ಗುಣಗಳು ಈ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸಲಿವೆ ಎಂಬ ನಂಬಿಕೆಯಿದೆ ಎಂದಿದ್ದಾರೆ.