ನಟ ಮಿಥುನ್ ಚಕ್ರವರ್ತಿಗೆ ಎದೆನೋವು, ಆಸ್ಪತ್ರೆಗೆ ದಾಖಲು ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲ್ಕತಾ: ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಿರಿಯ ನಟ ಮತ್ತು ಬಿಜೆಪಿ ನಾಯಕ ( ) ಮಿಥುನ್ ಚಕ್ರವರ್ತಿ ( ) ಅವರಿಗೆ ದಿಢೀರ್ ಎದೆ ನೋವು ( ) ಕಾಣಿಸಿಕೊಂಡಿದ್ದು, ಶನಿವಾರ ಬೆಳಗ್ಗೆ ಮಿಥುನ್ ದಾ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಇದನ್ನೂ ಓದಿ: ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ದಾಂಪತ್ಯದಲ್ಲಿ ಬಿರುಕು: 12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಇಶಾ ಡಿಯೋಲ್ತೀವ್ರ ನಿಗಾಘಟಕದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.ಮಿಥುನ್ ಚಕ್ರವರ್ತಿ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. ನಟ ಮತ್ತು ರಾಜಕಾರಣಿ ಮಿಥುನ್ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದರು.