ರಿಯಾ ಚಕ್ರವರ್ತಿ ಬಂಧನಕ್ಕೊಳಗಾಲೂ ಸಿದ್ಧ: ವಕೀಲ ಸತೀಶ್ ಸುಶಾಂತ್ ಸಿಂಗ್ ರಜ್ಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿರುವ ರಿಯಾ ಚಕ್ರವರ್ತಿ ಬಂಧನಕ್ಕೆ ಒಳಗಾಗುವುದಕ್ಕೂ ಸಿದ್ಧರಿದ್ದಾರೆ ಎಂದು ಅವರ ಪರ ವಕೀಲ ಸತೀಶ್ ಮಾನೆಶಿಂಧೆ ಹೇಳಿದ್ದಾರೆ. ಮುಂಬೈ: ಸುಶಾಂತ್ ಸಿಂಗ್ ರಜ್ಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿರುವ ರಿಯಾ ಚಕ್ರವರ್ತಿ ಬಂಧನಕ್ಕೆ ಒಳಗಾಗುವುದಕ್ಕೂ ಸಿದ್ಧರಿದ್ದಾರೆ ಎಂದು ಅವರ ಪರ ವಕೀಲ ಸತೀಶ್ ಮಾನೆಶಿಂಧೆ ಹೇಳಿದ್ದಾರೆ.ಪ್ರೀತಿಸುವುದು ಅಪರಾಧ ಎಂದಾದರೆ, ತಮ್ಮ ಪ್ರೀತಿಗಾಗಿ ಪರಿಸ್ಥಿತಿ ಎದುರಿಸಬೇಕು ಎಂದಾದರೆ ರಿಯಾ ಚಕ್ರವರ್ತಿ ಬಂಧನಕ್ಕೆ ಒಳಗಾಗುವುದಕ್ಕೂ ಸಿದ್ಧರಿದ್ದಾರೆ ಎಂದು ವಕೀಲರು ಹೇಳಿದ್ದಾರೆ. ರಿಯಾ ಚಕ್ರವರ್ತಿ ಮುಗ್ಧರು, ಯಾವುದೇ ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸಿಲ್ಲ ಎಂದೂ ವಕೀಲರು ಹೇಳಿದ್ದಾರೆ. ಈ ನಡುವೆ ಎನ್ ಸಿಬಿ ಸಮನ್ಸ್ ಹಿನ್ನೆಲೆಯಲ್ಲಿ ಎನ್ ಸಿಬಿ ಕಚೇರಿಗೆ ಭಾನುವಾರ ಬೆಳಿಗ್ಗೆ ರಿಯಾ ಚಕ್ರವರ್ತಿ ತೆರಳಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಎನ್ ಸಿಬಿ ರಿಯಾ ಚಕ್ರವರ್ತಿ ಅವರ ಕಿರಿಯ ಸಹೋದರನನ್ನು ಬಂಧಿಸಿತ್ತು.