ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಚಿತ್ರ ಅಳವಡಿಕೆ, ನಟ ನವಾಜುದ್ದೀನ್ ಸಹೋದರನ ಮೇಲೆ ದೂರು ದಾಖಲು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಚಿತ್ರವನ್ನು ಪೋಸ್ಟ್ ಮಾಡಿದ್ದ ಆರೋಪದ ಮೇರೆಗೆ ಬಾಲಿವುಡ್ ನಟ ನವಾಜುದ್ದೀನ್ ಸಹೋದರನ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮುಜಾಫರ್ ನಗರ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಚಿತ್ರವನ್ನು ಪೋಸ್ಟ್ ಮಾಡಿದ್ದ ಆರೋಪದ ಮೇರೆಗೆ ಬಾಲಿವುಡ್ ನಟ ನವಾಜುದ್ದೀನ್ ಸಹೋದರನ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಚಿತ್ರ ಹಾಕಿದ್ದ ಹಿನ್ನೆಲೆಯಲ್ಲಿ ಹಿಂದೂಪರ ಕಾರ್ಯಕರ್ತರ ದೂರಿನ ಆಧಾರದ ಮೇಲೆ ಅಯಜುದ್ದೀನ್ ವಿರುದ್ಧ ಬುದ್ದಾನ್ ಪೊಲೀಸರು ನಿನ್ನೆ ಸಂಜೆ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ಮುಂದುವರೆದಿದೆ ಎಂದು ಬುದ್ದಾನ್ ವೃತ್ತ ನಿರೀಕ್ಷಿಕ ಹರಿರಾಮ್ ಯಾದವ್ ತಿಳಿಸಿದ್ದಾರೆ. ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಚಿತ್ರ ಅಳವಡಿಕೆ ಮೂಲಕ ಅಯಜುದ್ದೀನ್ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ದೂರು ನೀಡಿರುವ ಹಿಂದೂ ಯುವ ವಾಹಿನಿ ಮುಖಂಡ ಭರತ್ ಕುಮಾರ್ ಹೇಳಿದ್ದಾರೆ. ಈ ಮಧ್ಯೆ ಹಿಂದೂ ವಾಹಿನಿ ಕಾರ್ಯಕರ್ತರು ಬುದ್ದಾನ್ ನಲ್ಲಿ ಪ್ರತಿಭಟನೆ ನಡೆಸಿ, ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.