ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಕೋರ್ಟ್ ಗೆ ಹಾಜರಾದ ಸಲ್ಮಾನ್‌ ಖಾನ್‌ ಕೃಷ್ಣ ಮೃಗ ಬೇಟೆ ಮತ್ತು ಅಕ್ರಮ ಶಸ್ತ್ರಾಸ್ತ್ರ ಪ್ರಕರಣದ ಸಂಬಂಧ ಜೋಧ್‌ಪುರ್‌ ಕೋರ್ಟ್‌‌ಗೆ ಸಲ್ಮಾನ್‌ ಖಾನ್‌ ಬುಧವಾರ ಹಾಜರಾಗಿದ್ದಾರೆ... ನವದೆಹಲಿ: ಕೃಷ್ಣ ಮೃಗ ಬೇಟೆ ಮತ್ತು ಅಕ್ರಮ ಶಸ್ತ್ರಾಸ್ತ್ರ ಪ್ರಕರಣದ ಸಂಬಂಧ ಜೋಧ್‌ಪುರ್‌ ಕೋರ್ಟ್‌‌ಗೆ ಸಲ್ಮಾನ್‌ ಖಾನ್‌ ಬುಧವಾರ ಹಾಜರಾಗಿದ್ದಾರೆ. ಕೃಷ್ಣ ಮೃಗ ಬೇಟೆ ಮತ್ತು ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಲ್ಮಾನ್ ಖಾನ್ ಅವರ ಹೇಳಿಕೆಯನ್ನು ಪಡೆಯುವ ಸಾಧ್ಯತೆ ಇದೆ. ಕಳೆದ ಗುರುವಾರ ಅನಾರೋಗ್ಯದ ಹಿನ್ನಲೆಯಲ್ಲಿ ಸಲ್ಮಾನ್ ಖಾನ್ ಅವರು ನ್ಯಾಯಾಲಯಕ್ಕೆ ಗೈರಾಗಿದ್ದರು. ಅನಾರೋಗ್ಯ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಲು ಸಾಧ್ಯವಾಗುತ್ತಿಲ್ಲ ಎಂದು ಮನವಿ ಮಾಡಿದ್ದರು. ಈ ಸಂಬಂಧ ಸಲ್ಲು ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಅನುಪಮಾ ಬಿಜ್ಲಾನಿ ಅವರು ಸ್ವೀಕರಿಸಿದ್ದು ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಲಾಗಿತ್ತು. ಕೋರ್ಟ್ ಆದೇಶದಂತೆ ಸಲ್ಮಾನ್ ಇಂದು ಕೋರ್ಟ್ ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.