ಗಂಡು ಮಗುವಿಗೆ ಜನ್ಮ ನೀಡಿದ ನಟಿ ಯಾಮಿ ಗೌತಮ್: ಮಗನ ಹೆಸರು ರಿವೀಲ್ ಮಾಡಿದ ದಂಪತಿ! ನಟಿ ಯಾಮಿ ಗೌತಮ್‌ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಕ್ಷಯ ತೃತೀಯ ದಿನವೇ (ಮೇ 10) ಮಗುವಿಗೆ ಜನ್ಮ ನೀಡಿದ್ದು ಇದೀಗ ಆ ವಿಚಾರ ಬಹಿರಂಗಪಡಿಸಿದ್ದಾರೆ. ನಟಿ ಯಾಮಿ ಗೌತಮ್‌ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಕ್ಷಯ ತೃತೀಯ ದಿನವೇ (ಮೇ 10) ಮಗುವಿಗೆ ಜನ್ಮ ನೀಡಿದ್ದು ಇದೀಗ ಆ ವಿಚಾರ ಬಹಿರಂಗಪಡಿಸಿದ್ದಾರೆ.ʻಪೋಷಕರಾಗಿ ಈ ಸುಂದರ ಪ್ರಯಾಣವನ್ನು ನಾವು ಪ್ರಾರಂಭಿಸಿದಾಗ, ನಮ್ಮ ಮಗನಿಗಾಗಿ ಕಾಯುತ್ತಿರುವ ಉಜ್ವಲ ಭವಿಷ್ಯವನ್ನು ನಾವು ಕುತೂಹಲದಿಂದ ನಿರೀಕ್ಷಿಸುತ್ತೇವೆ. ಅವನು ಸಾಧಿಸುವ ಪ್ರತಿ ಮೈಲುಗಲ್ಲು, ಅವರು ನಮ್ಮ ಇಡೀ ಕುಟುಂಬಕ್ಕೆ ಮತ್ತು ನಮ್ಮ ಪ್ರೀತಿಯ ರಾಷ್ಟ್ರಕ್ಕೆ ಹೆಮ್ಮೆಯ ದಾರಿದೀಪವಾಗಿ ಬೆಳೆಯುತ್ತಾನೆ ಎಂಬ ಭರವಸೆ ಮತ್ತು ನಂಬಿಕೆಯಿಂದ ನಾವಿದ್ದೇವೆ ‌ ಎಂದು ಯಾಮಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಹಾಗೇ ಮಗನ ಹೆಸರನ್ನು ರಿವೀಲ್‌ ಮಾಡಿದ್ದಾರೆ. (@)‘ವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ. ಮಗು ಜನಸಿರುವ ವಿಚಾರವನ್ನು 10 ದಿನಗಳ ನಂತರ ನಟಿ ಅನೌನ್ಸ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟಿ ಸಂತಸ ವ್ಯಕ್ತಪಡಿಸಿದ್ದಾರೆ. ಸೂರ್ಯ ಆಸ್ಪತ್ರೆಯ ವೈದ್ಯರಿಗೆ, ವಿಶೇಷವಾಗಿ ಡಾ. ಭೂಪೇಂದರ್ ಅವಸ್ತಿ ಮತ್ತು ಡಾ. ರಂಜನಾ ಧನು ಅವರ ಪರಿಣಿತಿ ಹಾಗೂ ದಣಿವರಿಯದ ಪ್ರಯತ್ನ. ಈ ಸಂತೋಷದಾಯಕ ಸಂದರ್ಭವನ್ನು ಸಾಧ್ಯವಾಗಿಸಿದಕ್ಕೆ ನಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ ಎಂದಿದ್ದಾರೆ.