ರಾಹುಲ್ ಸಿಂಗ್ ಜಾಮೀನು ರದ್ಧುಗೊಳಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಪ್ರತ್ಯೂಷಾ ತಾಯಿ ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಸ್ನೇಹಿತ ರಾಹುಲ್ ರಾಜ್ ಸಿಂಗ್ ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕೆಂದು, ಆಕೆಯ ತಾಯಿ... ನವದೆಹಲಿ: ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಸ್ನೇಹಿತ ರಾಹುಲ್ ರಾಜ್ ಸಿಂಗ್ ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕೆಂದು, ಆಕೆಯ ತಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಮಗಳ ಮೃತ ದೇಹದ ಮೇಲೆ ಗಾಯದ ಗುರುತುಗಳಿದ್ದವು, ಇದು ಆಕೆಯ ಮೇಲೆ ಹಲ್ಲೆ ನಡೆಸಿರುವುದಕ್ಕೆ ಸಾಕ್ಷಿಯಾಗಿದೆ, ಹೀಗಾಗಿ ರಾಹುಲ್ ರಾಜ್ ಸಿಂಗ್ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕೆಂದು ಸೋಮ ಬ್ಯಾನರ್ಜಿ ಮನವಿ ಮಾಡಿದ್ದಾರೆ. ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯನ್ನು ರಾಹುಲ್ ಕೊಲೆ ಮಾಡಿದ್ದಾನೆ. ಹೀಗಾಗಿ ಆತನನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕೆಂದು ಸೋಮ ಬ್ಯಾನರ್ಜಿ ಮನವಿಯಲ್ಲಿ ತಿಳಿಸಿದ್ದಾರೆ. ಏಪ್ರಿಲ್ 25 ರಂದು ಹೈಕೋರ್ಟ್ ರಾಹುಲ್ ರಾಜ್ ಸಿಂಗ್ ಗೆ ನಿರೀಕ್ಷಣಾ ಜಾಮೀನು ನೀಡಿತ್ತು.