ದಬಾಂಗ್ -3 ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಸಲ್ಮಾನ್! ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರೊಂದಿಗೆ ದಬಾಂಗ್ -3 ಚಿತ್ರದ ಪ್ರಚಾರ ನಡೆಸಲಿದ್ದಾರೆ. ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರೊಂದಿಗೆ ದಬಾಂಗ್ -3 ಚಿತ್ರದ ಪ್ರಚಾರ ನಡೆಸಲಿದ್ದಾರೆ.ಸಲ್ಮಾನ್ ಖಾನ್ ಅವರ ಭಾರಿ ಸುದ್ದಿಯಲ್ಲಿರುವ ದಬಾಂಗ್ -3 ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಇದರಲ್ಲಿ ಕನ್ನಡದ ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಕೂಡ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಲಾಗುತ್ತಿದ್ದು, ಅದಕ್ಕೆ ಸುದೀಪ್ ಧ್ವನಿ ನೀಡಲಿದ್ದಾರೆ. ಈ ಚಿತ್ರ ದಕ್ಷಿಣ ಭಾರತದ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಪ್ರಚಾರಕ್ಕಾಗಿ ಸಲ್ಮಾನ್ ಬೆಂಗಳೂರಿಗೆ ಡಿಸೆಂಬರ್ 17 ರಂದು ಆಗಮಿಸಲಿದ್ದಾರೆ. ಚಿತ್ರದ ನಿರ್ದೇಶಕ ಪ್ರಭುದೇವ ಮತ್ತು ನಿರ್ಮಾಪಕ ಅರ್ಬಾಜ್ ಖಾನ್ ಕೂಡ ಆಗಮಿಸುವ ನಿರೀಕ್ಷೆಯಿದೆ. ಇದರಲ್ಲಿ ಸೊನಾಕ್ಷಿ ಸಿನ್ಹಾ ಮತ್ತು ಸಾಯಿ ಮಾಂಜರೇಕರ್ ಮುಖ್ಯ ಪಾತ್ರದಲ್ಲಿದ್ದಾರೆ