28 ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆದ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನ್ಯೂಮೋನಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತಾ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ. ನವದೆಹಲಿ: ನ್ಯೂಮೋನಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತಾ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ.ಕಳೆದ 28 ದಿನಗಳಿಂದ ದೆಹಲಿಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಗುಣಮುಖರಾಗಿ ಮನೆಗೆ ಮರಳಿದ್ದಾರೆ.90 ವರ್ಷದ ಲತಾ ಮಂಗೇಶ್ಕರ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು.ಲತಾ ಮಂಗೇಶ್ಕರ್ ಅವರು ಹಿಂದಿ ಸೇರಿದಂತೆ 36ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿದ್ದಾರೆ.