ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿ! ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿಯಾಗಿದ್ದಾರೆ. ಮುಂಬೈ: ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಪರಿಸ್ಥಿತಿ ತೀವ್ರ ಗಂಭೀರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಶ್ರವಣ್ ರಾಥೋಡ್ ಮೃತಪಟ್ಟಿರುವ ವಿಚಾರವನ್ನು ಚಿತ್ರ ನಿರ್ದೇಶಕ ಅನಿಲ್ ಶರ್ಮಾ ಎಂಬುವರು ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡು ಸಂತಾಪ ಸೂಚಿಸಿದ್ದಾರೆ. .. # .. .. . # .. . . ../Unop0Kctp866 ವರ್ಷದ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಅವರು ಮುಂಬೈಯ ಎಸ್ ಎಲ್ ರಹೇಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಶ್ರವಣ್ ರಾಥೋಡ್ ಅವರ ಚೇತರಿಕೆಗಾಗಿ ಪ್ರಾರ್ಥಿಸೋಣ ಎಂದು ಸಂಗೀತ ನಿರ್ದೇಶಕ ನದೀಮ್ ಸೈಫಿ ಇನ್ಸಾಟಾಗ್ರಾಮ್ ನಲ್ಲಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ನದೀಮ್- ಶ್ರವಣ್ 90ರ ದಶಕದಲ್ಲಿ ಪ್ರಖ್ಯಾತ ಸಂಗೀತ ಸಂಯೋಜಕರು. ಆಶಿಕಿ, ಸಜಾನ್, ಅಮಿರ್ ಖಾನ್ ಅಭಿನಯದ ರಾಜ ಹಿಂದೂಸ್ತಾನಿಯಂತಹ ಹಿಟ್ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು.