ಸಂಜಯ್ ದತ್ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಿಗಾಗಿ ಪ್ರಾರ್ಥಿಸಿ; ಮಾನ್ಯತಾ ಬಾಲಿವುಡ್‌ ನಟ ಸಂಜಯ್‌ ದತ್‌ಗೆ (61 ವರ್ಷ) ಶ್ವಾಸಕೋಶ ಕ್ಯಾನ್ಸರ್‌ ಪತ್ತೆಯಾಗಿದ್ದು, ಮುಂಬೈನಲ್ಲೇ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪತ್ನಿ ಮಾನ್ಯತಾ ಸ್ಪಷ್ಟ ಪಡಿಸಿದ್ದಾರೆ. ಮುಂಬೈ: ಬಾಲಿವುಡ್‌ ನಟ ಸಂಜಯ್‌ ದತ್‌ಗೆ (61 ವರ್ಷ) ಶ್ವಾಸಕೋಶ ಕ್ಯಾನ್ಸರ್‌ ಪತ್ತೆಯಾಗಿದ್ದು, ಮುಂಬೈನಲ್ಲೇ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪತ್ನಿ ಮಾನ್ಯತಾ ಸ್ಪಷ್ಟ ಪಡಿಸಿದ್ದಾರೆ.ಸಂಜುಬಾಬಾ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ 4ನೇ ಹಂತದಲ್ಲಿದ್ದು ಎಲ್ಲಾ ರೀತಿಯ ಪ್ರಾಥಮಿಕ ಚಿಕಿತ್ಸೆಯನ್ನು ಕೋಕಿಲಾ ಬೆನ್ ಧೀರುಭಾಯಿ ಆಸ್ಪತ್ರೆಯಲ್ಲಿ ನಿಯಮಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನಹಂತದ ಚಿಕಿತ್ಸೆಗೆ ವಿದೇಶಕ್ಕೆ ತೆರಳುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಮಾನ್ಯತಾ ಹೇಳಿದ್ದಾರೆ.ಸಂಜು ಜೀವನದಲ್ಲಿ ಸಾಕಷ್ಟು ಏಳು–ಬೀಳುಗಳನ್ನು ಕಂಡಿದ್ದಾರೆ, ಆದರೆ ಪ್ರತಿಯೊಂದು ಕಠಿಣ ಪರಿಸ್ಥಿತಿಯಲ್ಲಿಯೂ ಅವರಿಗೆ ಮುಂದೆ ಸಾಗುವಂತೆ ಮಾಡಿರುವುದು ನಿಮ್ಮ ಬೆಂಬಲ ಮತ್ತು ಮೆಚ್ಚುಗೆ. ಅದಕ್ಕೆ ನಾವು ಸದಾ ಋಣಿಯಾಗಿರುತ್ತೇವೆ. ಈ ನಮಗೆ ಮತ್ತೊಂದು ಕಠಿಣ ಸವಾಲು ಮುಂದಿದೆ, ನೀವು ಅದೇ ಪ್ರೀತಿ ಮತ್ತು ಕಾಳಜಿಯನ್ನು ತೋರುವಿರೆಂದು ನನಗೆ ಭರವಸೆಯಿದೆ. ಯಾವುದೇ ನಕಾರಾತ್ಮ ಯೋಚನೆಗಳಿಗೂ ಸರಿಯದೆ ಸಂಜುಗಾಗಿ ನಗುನಗುತ್ತ, ಸಹಜ ಬದುಕನ್ನು ಸಾಗಿಸಬೇಕಿದೆ. ಇದು ಸುದೀರ್ಘ ಪ್ರಯಾಣವಾಗಿರಲಿದೆ' ಎಂದಿದ್ದಾರೆ. ಸಂಜಯ್‌ ದತ್ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ನಿಲ್ಲಿಸಿ ಹಾಗೂ ವೈದ್ಯರು ಅವರ ಕರ್ತವ್ಯ ನಿರ್ವಹಿಸಲು ಬಿಡಿ ಎಂದು ಕುಟುಂಬ ಮನವಿ ಮಾಡಿದೆ.ಇತ್ತೀಚೆಗಷ್ಟೇ ಉಸಿರಾಟದ ಸಮಸ್ಯೆಯಿಂದ ಬಾಂದ್ರಾದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ನಡೆಸಿದ ಹಲವು ಪರೀಕ್ಷೆಗಳಿಂದ ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು. . . , : ' ’ ://./YuQe4TUpIY