ಸ್ವಾರ್ಥಕ್ಕಾಗಿ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದ ಕಾಂಗ್ರೆಸ್: ಸಿಟಿ ರವಿ ವಾಗ್ದಾಳಿ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷ ತಾನು ಮಾಡಿದ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಟೀಕಿಸಿದ್ದಾರೆ. ಬೆಂಗಳೂರು: ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷ ತಾನು ಮಾಡಿದ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಟೀಕಿಸಿದ್ದಾರೆ.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ತುರ್ತು ಪರಿಸ್ಥಿತಿ ಹೇರುವ ಇಂಥ ಪರಿಸ್ಥಿತಿ ಯಾವತ್ತೂ ಬರಬಾರದು ಎಂದಿದ್ದರೆ, ಆ ಕರಾಳ ಅಧ್ಯಾಯದ ನೆನಪು ಮಾಡಿಕೊಳ್ಳುವ ಅವಶ್ಯಕತೆ ಇದೆ. ಕಾಂಗ್ರೆಸ್ಸಿಗೆ ತಾವು ಮಾಡಿದ್ದು ತಪ್ಪು ಎಂದು ಅನಿಸಿದರೆ, ಸಾರ್ವಜನಿಕ ಕ್ಷಮೆ ಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.ಕಾಂಗ್ರೆಸ್ ಪಕ್ಷದ ಡಿಎನ್‍ಎಯಲ್ಲೇ ವ್ಯಕ್ತಿಗತ ಸ್ವಾರ್ಥಕ್ಕಾಗಿ ಏನನ್ನು ಬೇಕಾದರೂ ಮಾಡುವ ಮನಸ್ಥಿತಿ ಇದೆ. ಈ ಮನಸ್ಥಿತಿ ಪ್ರಜಾಪ್ರಭುತ್ವಕ್ಕೂ ಅಪಾಯಕಾರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಇಂದಿರಾ ಗಾಂಧಿಯವರ ನೇತೃತ್ವದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕೆಲಸ ಮಾಡಿತ್ತು. ಅದೊಂದು ಕರಾಳ ದಿನ ಎಂದು ತಿಳಿಸಿದರು.ಅವತ್ತು ಮಾನ್ಯ ಸಿದ್ದರಾಮಯ್ಯ ಕಾಂಗ್ರೆಸ್ ಜೊತೆಗಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ, ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ಸಿನ ಜೊತೆಗಿದ್ದರು. ಇಂದಿರಾ ಗಾಂಧಿಯವರು ಡಾ. ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ದಮನ ಮಾಡಿದ್ದರು ಎಂಬುದು ಖರ್ಗೆಯವರಿಗೆ ಅರ್ಥ ಆಗಬೇಕಿತ್ತು ಎಂದು ಹೇಳಿದರು.ಜಗನ್ನಾಥರಾವ್‌ ಜೋಶಿ ಅವರ ಜಯಂತಿ ಮತ್ತು ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನದ ಅಂಗವಾಗಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳು ಜಗನ್ನಾಥ ರಾವ್ ಜೋಶಿ ಮತ್ತು ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ… ../alTyTiTViPತನ್ನ ಸ್ವಾರ್ಥಕ್ಕಾಗಿ, ಅಧಿಕಾರದಲ್ಲಿ ಉಳಿಯಬೇಕೆಂಬ ಏಕೈಕ ದುರುದ್ದೇಶದಿಂದ ಅಲಹಾಬಾದ್ ಕೋರ್ಟ್ ತೀರ್ಪಿನ ವಿರುದ್ಧ ಸಂವಿಧಾನವನ್ನೇ ಬುಡಮೇಲು ಮಾಡಿದ್ದರು. ವಿಪಕ್ಷ ನಾಯಕರನ್ನೆಲ್ಲ ಜೈಲಿಗೆ ಅಟ್ಟಿದ್ದಲ್ಲದೆ, ಪತ್ರಿಕಾ ಸ್ವಾತಂತ್ರ್ಯ ಹರಣ ಮಾಡಿದ್ದರು. ಮೂಲಭೂತ ಹಕ್ಕುಗಳ ದಮನ ಮಾಡಿದ್ದರು ಎಂದು ವಿವರಿಸಿದರು.