ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗ್ತಾ; ನೀವು ಸ್ವಯಂಘೋಷಿತ ವಕೀಲರಲ್ಲವೇ? ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬೆಂಗಳೂರು: ಸನ್ಮಾನ್ಯ ಸಿಎಂ ಸಿದ್ದರಾಮಯ್ಯನವರೇ ಮುಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, "50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ 'ಒತ್ತಾಯ' ಮಾಡಿದ್ದಾರೆ, ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ.ಸನ್ಮಾನ್ಯ ಸಿಎಂ @ ನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. "50:50ರ… ../9WC5gRtIGKಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ 'ಒತ್ತಾಯಿಸಿರುತ್ತಾರೆ ಎಂದರೆ ಮುಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ, ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ ಎಂದು ಎಚ್.ಡಿ.ಕೆ ಕಿಡಿ ಕಾರಿದ್ದಾರೆ.