ಜುಲೈ 18ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ ಜುಲೈ 18ರಂದು ಸಂಜೆ 6.30ಕ್ಕೆ ಅರಮನೆ ರಸ್ತೆಯಲ್ಲಿರುವ “ಹೋಟೆಲ್ ರ‍್ಯಾಡಿಸನ್ ಬ್ಲೂ (ಏಟ್ರಿಯಾ)” ನಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ಕರೆಯಲಾಗಿದೆ. ಬೆಂಗಳೂರು: ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18ರಂದು ನಗರದ ಖಾಸಗಿ ಹೊಟೇಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.ಜುಲೈ 26ರವರೆಗೆ ವಿಧಾನ ಮಂಡಲದ ಅಧಿವೇಶನ ನಡೆಯುಲಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಸಿಎಂ‌ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.ಜುಲೈ 18ರಂದು ಸಂಜೆ 6.30ಕ್ಕೆ ಅರಮನೆ ರಸ್ತೆಯಲ್ಲಿರುವ “ಹೋಟೆಲ್ ರ‍್ಯಾಡಿಸನ್ ಬ್ಲೂ (ಏಟ್ರಿಯಾ)” ನಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ಕರೆಯಲಾಗಿದೆ.ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಪರಿಷತ್ತಿನ ಸಭಾ ನಾಯಕ ಎನ್.ಎಸ್.ಭೋಸರಾಜು ಸೇರಿದಂತೆ ಪಕ್ಷದ ಎಲ್ಲ ಶಾಸಕರು ಹಾಗೂ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಅವರು ತಿಳಿಸಿದ್ದಾರೆ.