| ಕೋಲ್ಕತ್ತ-ಢಾಕಾ ಮೈತ್ರಿ ಎಕ್ಸ್‌ಪ್ರೆಸ್‌ ರೈಲು ರದ್ದು ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೋಲ್ಕತ್ತ-ಢಾಕಾ ನಡುವೆ ಸಂಚರಿಸುವ ಮೈತ್ರಿ ಎಕ್ಸ್‌ಪ್ರೆಸ್‌ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಬಾಂಗ್ಲಾದಲ್ಲಿ ಉದ್ವಿಗ್ನ ವಾತಾವರಣ ಇರುವುದರಿಂದ ಎರಡು ವಾರಕ್ಕೊಮ್ಮೆ ಸಂಚರಿಸುವ ಕೋಲ್ಕತ್ತ-ಖುಲ್ನಾ-ಕೋಲ್ಕತ್ತ ಬಂಧನ್ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. -- 19th 6th : ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿದ್ದು, ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ತಿಳಿಸಿದ್ದಾರೆ. ಸರ್ಕಾರದ ವಿರುದ್ಧ ಭಾನುವಾರದಿಂದ ಆರಂಭವಾಗಿರುವ ಬೃಹತ್‌ ಪ್ರತಿಭಟನೆಯಿಂದಾಗಿ ಇದುವರೆಗೆ 106 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಸೀನಾ ಅವರು ಇಂದು (ಸೋಮವಾರ) ರಾಜೀನಾಮೆ ಸಲ್ಲಿಸಿ, ದೇಶ ತೊರೆದಿದ್ದಾರೆ ಎಂದು ವರದಿಯಾಗಿದೆ. ಭಾರತ –ಬಾಂಗ್ಲಾ ಗಡಿಯಲ್ಲಿ ‘ಹೈ ಅಲರ್ಟ್’ ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ 4,096 ಕಿ.ಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಹೈ ಅಲರ್ಟ್ ಘೋಷಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.