ಮಣ್ಣು ಕುಸಿತ: ಶ್ರೀನಗರ–ಲೇಹ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧ ಶ್ರೀನಗರ: ಮೇಘಸ್ಫೋಟದ ನಂತರ ಅಲ್ಲಲ್ಲಿ ಮಣ್ಣು ಕುಸಿತ ಆಗಿರುವುದರಿಂದ ಶ್ರೀನಗರ–ಲೇಹ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮಧ್ಯ ಕಾಶ್ಮೀರದ ಗಂದೇರ್‌ಬಲ್‌ ಪ್ರದೇಶದ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಮಣ್ಣು ಕುಸಿತ ಉಂಟಾಗಿದೆ ಎಂದಿದ್ದಾರೆ. ‘ರಸ್ತೆಯಲ್ಲಿನ ವಾಹನಗಳನ್ನು ತೆರವುಗೊಳಿಸುವುದು ನಮ್ಮ ಆದ್ಯತೆ. ಮಣ್ಣು ಕುಸಿತದಿಂದಾಗಿ ತೊಂದರೆಗೆ ಸಿಲುಕಿರುವ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲಾಡಳಿತದ ಸಿಬ್ಬಂದಿ, ಪೊಲೀಸರು, ಖಾಸಗಿ ಸಂಸ್ಥೆಗಳವರು ಈ ಕೆಲಸಗಳಿಗೆ ಕೈಜೋಡಿಸಿದ್ದಾರೆ. ಲೇಹ್‌–ಲಡಾಖ್ ಪ್ರವಾಸ ಕೈಗೊಂಡಿರುವವರು ಹಾಗೂ ಅಮರನಾಥ ಯಾತ್ರೆಗೆ ಬಂದಿರುವವರು ಮುಂದಿನ ಆದೇಶದವರೆಗೆ ಕಾಯಬೇಕಿದೆ’ ಎಂದು ಗಂದೇರ್‌ಬಲ್‌ನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಗುಲ್ಜಾರ್ ಅಹಮದ್ ಮಾಹಿತಿ ನೀಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.