ಬಿಹಾರ | ಸಿಡಿಲು ಬಡಿದು ಐವರು ಸಾವು ಪಟ್ನಾ: ಬಿಹಾರದಲ್ಲಿ ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಐವರು ಮೃತಪಟ್ಟಿದ್ದಾರೆ ಎಂದು ಅಧಿಕೃತ ಪ್ರಕಟಣೆ ಗುರುವಾರ ತಿಳಿಸಿದೆ. ಜೆಹಾನಾಬಾದ್ ಜಿಲ್ಲೆಯಲ್ಲಿ ಮೂವರು ಹಾಗೂ ರೋಹ್ತಾಸ್ ಜಿಲ್ಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ () ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆ ನೀಡಿರುವ ಸಲಹೆಗಳನ್ನು ಪಾಲಿಸುವಂತೆಯೂ ಅವರು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.