: ಸಾವಿನ ಸಂಖ್ಯೆ 158ಕ್ಕೇರಿಕೆ, 213 ಮಂದಿಗೆ ಗಾಯ ವಯನಾಡ್‌: ಕೇರಳದ ವಯನಾಡಿನ ಮೇಪ್ಪಾಡಿಯಲ್ಲಿ ನಡೆದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 158ಕ್ಕೆ ಏರಿಕೆಯಾಗಿದೆ. 200 ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದ್ದು, ಈ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮಂಗಳವಾರ ತಿಳಿಸಿದೆ. ಮೃತ 158 ಮಂದಿಯಲ್ಲಿ 18 ಮಕ್ಕಳೂ ಸೇರಿದ್ದಾರೆ. 147 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, 86 ದೇಹಗಳ ಗುರುತು ಪತ್ತೆಯಾಗಿದೆ. ಪತ್ತೆಯಾದ 52 ದೇಹಭಾಗಗಳ ಪೈಕಿ 42ರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. 158 ದೇಹಗಳ ಪೈಕಿ 75 ದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಘಟನೆ ಸಂಭವಿಸಿದ ಸ್ಥಳದಿಂದ 213 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ 97 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೇನೆ, ಜಲಸೇನೆ, ಎನ್‌.ಡಿ.ಆರ್.ಎಫ್‌. ಒಟ್ಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಅವಶೇಷಗಳನ್ನು ತೆರವುಗೊಳಿಸುತ್ತಿವೆ. ಧ್ವಂಸಗೊಂಡ ಮನೆಗಳ ಉಳಿದ ಭಾಗಗಳಲ್ಲಿ ಶೋಧ ನಡೆಸುತ್ತಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.