<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..6884F7C5110A85F8E123D7DDBE69D376..2779")> ಪಟ್ನಾ: ಬಿಜೆಪಿಯ ಮೈತ್ರಿ ತೊರೆದು ಎರಡು ಬಾರಿ ಆರ್‌ಜೆಡಿ ಜೊತೆಗೆ ಕೈಜೋಡಿಸಿದ್ದನ್ನು ‘ರಾಜಕೀಯ ಪ್ರಮಾದ’ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಣ್ಣಿಸಿದ್ದಾರೆ. ಮತ್ತೆಂದಿಗೂ ಲಾಲು ಪ್ರಸಾದ್ ಅವರ ಆರ್‌ಜೆಡಿ ಪಕ್ಷದ ಜೊತೆಗೆ ಕೈಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. : 3.98% . . . . ಶುಕ್ರವಾರ ಇಲ್ಲಿ ಇಂದಿರಾಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು ಬಿಜೆಪಿ ಅಧ್ಯಕ್ಷ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರ ಉಪಸ್ಥಿತಿಯಲ್ಲಿ ಈ ಮಾತು ಹೇಳಿದರು. ಸೆಪ್ಟೆಂಬರ್ 3ರಂದು ಬಿಹಾರ ವಿಧಾನಸಭೆಯ ವಿರೋಧಪಕ್ಷದ ನಾಯಕ, ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಜೊತೆಗೆ ಗೋಪ್ಯ ಮಾತುಕತೆ ನಡೆಸಿದ್ದ ಹಿನ್ನೆಲೆಯಲ್ಲಿ ನಿತೀಶ್‌ ಕುಮಾರ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಾಹಿತಿ ಆಯುಕ್ತರ ನೇಮಕಾತಿಗೆ ಸಂಬಂಧಿಸಿದತೆ ನಾವು ಭೇಟಿ ಮಾಡಿದ್ದೆವು ಎಂದು ತೇಜಸ್ವಿ ಯಾದವ್ ಅವರು ಬಳಿಕ ಸ್ಪಷ್ಟಪಡಿಸಿದ್ದರು. ಈ ಕುರಿತ ಊಹಾಪೋಹಗಳಿಗೆ ಬಿಜೆಪಿ ಅಧ್ಯಕ್ಷರ ಸಮ್ಮುಖದಲ್ಲಿಯೇ ಮುಖ್ಯಮಂತ್ರಿ ಈ ಸ್ಪಷ್ಟನೆ ನೀಡಿದರು. ನಿತೀಶ್‌ ಅವರ ಜೆಡಿಯು ಕೇಂದ್ರದಲ್ಲಿ ಬಿಜೆಪಿ ಜೊತೆ ಮೈತ್ರಿ ಹೊಂದಿದ್ದು, ಪಕ್ಷದ ಇಬ್ಬರು ಸಚಿವರಾಗಿದ್ದಾರೆ. ಈಗಾಗಿ ನಕಾರಾತ್ಮಕ ಸಂದೇಶ ಹೋಗಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.