<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..47E9E719713E2DB4D12D597984AB87B2..22188")> ಇಂದೋರ್‌(ಮಧ್ಯ‍ಪ್ರದೇಶ): ನಗರದ ಹೊರವಲಯದಲ್ಲಿ ರೀಲ್ಸ್‌ ವಿಡಿಯೊ ಮಾಡಲು ತೆರಳಿದ್ದ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.‌ : 4.86% . . . . ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತೆಯು ತನ್ನ ಸ್ನೇಹಿತನೊಂದಿಗೆ ರೀಲ್ಸ್‌ ವಿಡಿಯೊ ಮಾಡಲು ತೆರಳಿದ್ದ ವೇಳೆ ಇಬ್ಬರು ವ್ಯಕ್ತಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಲ್ಹಾರಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಶಿವಕುಮಾರ್ ರಘುವಂಶಿ ಮಾಹಿತಿ ನೀಡಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಇಬ್ಬರು ಆರೋಪಿಗಳು ಯುವತಿಯ ಸ್ನೇಹಿತನಿಗೆ ಪರಿಚಿತರು ಎಂದು ತಿಳಿದು ಬಂದಿದೆ ಎಂದು ರಘುವಂಶಿ ಹೇಳಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ಸಂಬಂಧ ಇಬ್ಬರನ್ನೂ ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.