<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..358A9AC88C2AFA5EECE4E7A5821401D4..25774")> ಹೈದರಾಬಾದ್‌: ನಗರದ ಘಟಕೇಸರ್‌ನಲ್ಲಿ ಸಹೋದ್ಯೋಗಿಯೊಬ್ಬರ ಹತ್ಯೆಗೆ ಸಂಬಂಧಿಸಿದಂತೆ ಮೂವರು ಐಟಿ ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. : 3.98% . . . . ಸೆಪ್ಟೆಂಬರ್ 1ರಂದು ಫಾರ್ಮ್‌ಹೌಸ್‌ನಲ್ಲಿ ಹುಟ್ಟುಹಬ್ಬ ಆಚರಣೆಯ ವೇಳೆ ಗಜಾಂಬಿಕಲ್ ಅಜಯ್ ತೇಜಾ ಅವರನ್ನು ಈಜು ಕೊಳಕ್ಕೆ ತಳ್ಳಿ ಕೊಲೆ ಮಾಡಲಾಗಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತೇಜಾ ಅವರನ್ನು ಅವರ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರ ಹೊತ್ತಿಗೆ ತೇಜಾ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ಮಲ್ಕಾಜ್‌ಗಿರಿ ಜಿಲ್ಲೆಯ ಘಟಕೇಸರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ಮೃತ ವ್ಯಕ್ತಿಯ ಸಹೋದ್ಯೋಗಿಗಳಾದ ರಂಜಿತ್ ರೆಡ್ಡಿ, ಐಟಿ ಸಂಸ್ಥೆಯ ಮ್ಯಾನೇಜರ್ ಸಾಯಿ ಕುಮಾರ್, ಶ್ರೀಕಾಂತ್ ಮತ್ತು ಫಾರ್ಮ್‌ಹೌಸ್ ಮಾಲೀಕ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.