<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..E64E896046BF960D486E2475325A9DEC..34031")> ನವದೆಹಲಿ: ಕೃಷಿಗೆ ಸಂಬಂಧಿಸಿದ 7 ಬಹುದೊಡ್ಡ ಕಾರ್ಯಕ್ರಮಗಳಿಗೆ ಕೇಂದ್ರದ ಸಚಿವ ಸಂಪುಟ ಸಭೆಯು ₹13,960 ಕೋಟಿ ಬಿಡುಗಡೆಗೆ ಅನುಮೋದನೆ ನೀಡಿದೆ. : 4.86% . . . . ಇದರಲ್ಲಿ ₹2,817 ಕೋಟಿ ಡಿಜಿಟಲ್ ಅಗ್ರಿಕಲ್ಚರ್ ಮಿಷನ್ ಮತ್ತು ₹3,979 ಕೋಟಿ ಬೆಳೆ ವಿಜ್ಞಾನಕ್ಕಾಗಿ ಮೀಸಲಿಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕೃಷಿ ಶಿಕ್ಷಣ ಮತ್ತು ನಿರ್ವಹಣೆ ಬಲವರ್ಧನೆ ಯೋಜನೆಗೆ ₹2,291 ಕೋಟಿ, ಸುಸ್ಥಿರ ಜಾನುವಾರು ಆರೋಗ್ಯ ಮತ್ತು ಅವುಗಳ ಉತ್ಪಾದನೆ ಕುರಿತ ಯೋಜನೆಗೆ ₹1,702 ಕೋಟಿ ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಗಿದೆ. ₹860 ಕೋಟಿಯನ್ನು ತೋಟಗಾರಿಕೆಯ ಸುಸ್ಥಿರ ಅಭಿವೃದ್ಧಿಗಾಗಿ ಬಿಡುಗಡೆಗೆ ಸಮ್ಮತಿಸಲಾಗಿದೆ. ಕೃಷಿ ವಿಜ್ಞಾನ ಕೇಂದ್ರದ ಬಲವರ್ಧನೆ ₹1,202 ಕೋಟಿ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆಗೆ ₹1,115 ಕೋಟಿ ಬಿಡುಗಡೆಗೂ ಸಂಪುಟ ಸಮ್ಮತಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.