<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..3E7ECEBD13699F05614C62251E738820..36340")> ಇಂಫಾಲ್‌: ಮಣಿಪುರದಲ್ಲಿ ಕುಕಿ ಸಮುದಾಯದವರಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಜಾರಿಗೆ ತರುವಂತೆ ಆಗ್ರಹಿಸಿ ಕುಕಿ ಸಮುದಾಯದ ಮುಖಂಡರು ಶನಿವಾರ ರ್‍ಯಾಲಿ ನಡೆಸಿದ್ದಾರೆ. ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಅವರು ತಮ್ಮ ಸಮುದಾಯ‌ದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆನ್ನಲಾದ ಆಡಿಯೊ ವಿರುದ್ಧವೂ ಪ್ರತಿಭಟಿಸಿದ್ದಾರೆ. : 3.39% . . . . ‘ಕುಕಿ ಸಮುದಾಯವರಿಗೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ರಚಿಸುವಂತೆ ಒತ್ತಾಯಿಸಲು ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು’ ಎಂದು ಮುಖಂಡರೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಅವರು ನಮ್ಮ ಸಮುದಾಯದ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದು, ಪ್ರತಿಭಟನೆಯಲ್ಲಿ ಅದನ್ನೂ ಖಂಡಿಸಲಾಗಿದೆ’ ಎಂದು ಮತ್ತೊಬ್ಬ ಪ್ರತಿಭಟನಕಾರರು ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಮಣಿಪುರ ಸರ್ಕಾರ, ‘ಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೊ ಅಸಲಿಯಲ್ಲ. ಅದನ್ನು ತಿರುಚಲಾಗಿದೆ. ಮಣಿಪುದಲ್ಲಿ ಶಾಂತಿ ಕದಡುವ ದುರುದ್ದೇಶದಿಂದ ಈ ಆಡಿಯೊ‌ವ‌‌ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಪೊಲೀಸರು ಈ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದೆ. ಪಿಟಿಐ ಜತೆಗಿನ ಸಂದರ್ಶನದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿರೇನ್‌ ಸಿಂಗ್‌, ಪ್ರತ್ಯೇಕ ಆಡಳಿತ ಕೋರಿರುವ ಕುಕಿ ಸಮುದಾಯದ ಮನವಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.