<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..6F7323565E1C840D9D09779EAC49F0DB..6077")> ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಜಮ್ಮು ಮತ್ತು ಕಾಶ್ಮೀರವು ಶಾಂತಿ ಹಾಗೂ ಅಭಿವೃದ್ಧಿಯ ಹೊಸ ಯುಗ ಕಾಣುತ್ತಿದ್ದು, ಉಗ್ರವಾದಿಗಳ ತಾಣ ಈಗ ಪ್ರವಾಸೋದ್ಯಮದ ತಾಣವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. : 3.98% . . . . ಎರಡು ದಿನಗಳ ಪ್ರವಾಸಕ್ಕೆ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳುವ ಮುನ್ನ ಅವರು ಈ ಬಗ್ಗೆ ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ. ‘ಮೋದಿ ಸರ್ಕಾರದ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದ ಶಾಂತಿ ಮತ್ತು ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ. ಈ ಪ್ರದೇಶವು ಶೈಕ್ಷಣಿಕ ಮತ್ತು ಆರ್ಥಿಕ ಚಟುವಟಿಕೆಗಳ ಹೆಚ್ಚಳದೊಂದಿಗೆ ಭಯೋತ್ಪಾದಕರ ತಾಣದಿಂದ ಪ್ರವಾಸಿ ತಾಣವಾಗಿ ರೂಪಾಂತರಗೊಂಡಿದೆ’ ಎಂದು ಬರೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕರ್ತರ ಸಮ್ಮೇಳನದಲ್ಲಿ ಸಂವಾದ ನಡೆಸಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.