<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..B20F5DB8B949FC563FFA265C990B5F15..47792")> ನವದೆಹಲಿ: ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಸ್ಪೈಸ್‌ಜೆಟ್‌ ವಿಮಾನಯಾನ ಸಂಸ್ಥೆ ತನ್ನ 150 ಸಿಬ್ಬಂದಿಗೆ ವೇತನ ರಹಿತ ಮೂರು ತಿಂಗಳು ಕಡ್ಡಾಯ ರಜೆ ನೀಡಿದೆ. : 3.98% . . . . ಹಣಕಾಸು, ಕಾನೂನು ಮತ್ತು ಗುತ್ತಿಗೆದಾರರಿಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಸಂಸ್ಥೆ, ವಿಮಾನಗಳ ಹಾರಾಟದ ಸಂಖ್ಯೆಯನ್ನೂ ಕಡಿತಗೊಳಿಸಿದೆ. ಪ್ರಸ್ತುತ ಸ್ಪೈಸ್‌ಜೆಟ್‌ನ ಸುಮಾರು 22 ವಿಮಾನಗಳು ಮಾತ್ರ ಕಾರ್ಯಾಚರಣೆಯಲ್ಲಿವೆ ಎಂದು ವರದಿಯಾಗಿದೆ. ಸಂಸ್ಥೆಯ ದೀರ್ಘಾವದಿ ಸ್ಥಿರತೆಯನ್ನು ಗಮನದಲ್ಲಿ ಇರಿಸಿಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಮೂರು ತಿಂಗಳ ಬಳಿಕ ಸಿಬ್ಬಂದಿಯನ್ನು ಕೆಲಸಕ್ಕೆ ವಾಪಸ್‌ ಕರೆಸಿಕೊಳ್ಳಲಾಗುವುದು, ಕೆಲಸಕ್ಕೆ ಮರಳಿದ ನಂತರ ಅವರು ಈ ಮೊದಲಿದ್ದ ಹುದ್ದೆಯಲ್ಲೇ ಮುಂದುವರಿಯಲಿದ್ದಾರೆ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಸೌಲಭ್ಯಗಳನ್ನು ಪಡೆಯಲಿದ್ದಾರೆ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಸದ್ಯ ವಿಮಾನಯಾನ ಸಂಸ್ಥೆಯು ತನ್ನ ಆರ್ಥಿಕ ಸಂಕಷ್ಟದ ಹೊರೆ ಕಡಿಮೆ ಮಾಡಲು ಹಣ ಹೊಂದಿಸಲು ನೋಡುತ್ತಿದೆ ಎಂದು ಹೇಳಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.