<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..5ABFF62DC39DE2254CCE543FFCED900B..50856")> ಮಿಜೋರಾಂ: ಮಿಜೋರಾಂನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೌನ್‌ಪುಯಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ಹೊಸದಾಗಿ ನಿರ್ಮಾಣವಾಗಿದ್ದ ರೈಲು ನಿಲ್ದಾಣ ಉದ್ಘಾಟನೆಗೆ ಮುನ್ನವೇ ಕುಸಿದಿದೆ. : 3.98% . . . . ರೈಲು ನಿಲ್ದಾಣ ಕುಸಿಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಮಿಜೋರಾಂನ ಈಶಾನ್ಯ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಆ. 20ರಿಂದ ಹಲವೆಡೆ ಭೂಕುಸಿತ ಸಂಭವಿಸುತ್ತಲೇ ಇದೆ. ಈ ಹಿನ್ನೆಲೆ ನಾಲ್ಕು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ. ಮಾರ್ಚ್‌ನಿಂದ ಈವರೆಗೆ ಭೂಕುಸಿತ ಹಾಗೂ ಮಳೆ ಸಂಬಂಧಿ ಅವಘಡಗಳಿಂದಾಗಿ 40ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ಸರ್ಕಾರ ತಿಳಿಸಿದೆ. | #: . ( - ://./n147TvqRQz) ../p2TZK4vaTI ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.