<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..DDFF870623D7CD41E672C4DDA05AAAB9..52246")> ನವದೆಹಲಿ: ಡಿಎಂಕೆ ಸಂಸದ ಎಸ್‌. ಜಗತ್‌ರಾಚಕನ್‌ ಮತ್ತು ಅವರ ಕುಟುಂಬ ಸದಸ್ಯರು ವಿದೇಶಿ ವಿನಿಯ ಕಾಯ್ದೆ (ಫೆಮಾ) ಉಲ್ಲಂಘಿಸಿರುವ ಪ್ರಕರಣ ಸಂಬಂಧ ಅವರಿಗೆ ₹908 ಕೋಟಿ ದಂಡ ವಿಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಬುಧವಾರ ಹೇಳಿದೆ. : 3.98% . . . . 2020ರ ಸೆಪ್ಟೆಂಬರ್‌ನಲ್ಲಿ ವಶಪಡಿಸಿಕೊಂಡ ₹89.19 ಕೋಟಿ ಮೌಲ್ಯದ ಆಸ್ತಿಗಳನ್ನು ಫೆಮಾ ಅಡಿಯಲ್ಲಿ ಆಗಸ್ಟ್ 26ರಂದು ಹೊರಡಿಸಿದ ಆದೇಶದ ನಂತರ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಅರಕ್ಕೋಣಂ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ತಮಿಳುನಾಡಿನ ಉದ್ಯಮಿ ಜಗತ್‌ರಾಚಕನ್ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಅವರಿಗೆ ಸಂಬಂಧಿಸಿದ ಕಂಪನಿಗಳ ವಿರುದ್ಧ ಫೆಮಾ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಇ.ಡಿ ಹೇಳಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.