<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..084C79A71B06EA970CD76BB554329468..12035")> ನೋಯ್ಡಾ: ಉತ್ತರ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ ಆರು ವರ್ಷದ ಬಾಲಕಿಯ ಮೇಲೆ ಕಾರ್ಮಿಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. : 3.39% . . . . ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸ್‌ ಇನ್ಸ್‌ಪೆಕ್ಟರ್ ಧ್ರುವ್ ಭೂಷಣ್ ದುಬೆ ಹೇಳಿದ್ದಾರೆ. ಬಾಲಕಿ ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಕಾರ್ಮಿಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಷಯವನ್ನು ಬಾಲಕಿ ತನ್ನ ಶಿಕ್ಷಕರಿಗೆ ತಿಳಿಸಿದ್ದು , ಪ್ರಾಂಶುಪಾಲರಿಗೂ ತಿಳಿಸಲಾಗಿದೆ. ಆದರೆ ಶಾಲೆಯ ಆಡಳಿತ ಮಂಡಳಿ ವಿಷಯವನ್ನು ಮುಚ್ಚಿ ಹಾಕಲು ಯತ್ನಿಸಿದೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆರೋಪಿ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.