<.... (="0a3e239a54e658d4ec5f01f7116396d2", =".CA8E4F893CD029437B2A7F0DFF543F00..F52101D3AAC6CB173B7AFDBFA6FB2900..12913")> ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ತಮ್ಮನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಕ್ರಮ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು (ಗುರುವಾರ) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. : 4.86% . . . . ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಉಜ್ಜಲ್ ಭುಯನ್ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ. ಆಗಸ್ಟ್ 23 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ತನ್ನ ಪ್ರತಿವಾದ ಅಫಿಡವಿಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿತ್ತು. ಅಲ್ಲದೆ ಮರು ಅರ್ಜಿ ಸಲ್ಲಿಸಲು ಕೇಜ್ರಿವಾಲ್‌ಗೆ ಎರಡು ದಿನಗಳ ಕಾಲಾವಕಾಶ ನೀಡಿತ್ತು. ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಹಾಗೂ ಪ್ರಕರಣದಲ್ಲಿ ತಮ್ಮನ್ನು ಸಿಬಿಐ ಬಂಧಿಸಿದ ಕ್ರಮವನ್ನು ಎತ್ತಿಹಿಡಿದಿದ್ದ ದೆಹಲಿ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಒಟ್ಟು ಎರಡು ಅರ್ಜಿಯನ್ನು ಕೇಜ್ರಿವಾಲ್ ಸಲ್ಲಿಸಿದ್ದಾರೆ. ಜೂನ್ 26ರಂದು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.