ಐವರು ನಕ್ಸಲರು ಶರಣು ಸುಕ್ಮಾ : ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಐವರು ನಕ್ಸಲರು ‍ಪೊಲೀಸರು ಮತ್ತು ಸಿಆರ್‌ಪಿಎಫ್‌ ಸಿಬ್ಬಂದಿ ಎದುರು ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಎಲ್ಲ ನಕ್ಸಲರು ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ಯೋಜನೆಯಡಿಯಲ್ಲಿ ಪ್ರಯೋಜನಗಳನ್ನು ಪಡೆಯಲಿದ್ದಾರೆ ಎಂದರು. ಶರಣಾದ ನಕ್ಸಲರು, ನಕ್ಸಲ್‌ ಸಂಘಟನೆಗಳು ಕರೆ ನೀಡುವ ಬಂದ್‌ಗಳ ಸಮಯದಲ್ಲಿ ಪೋಸ್ಟರ್‌ ಮತ್ತು ಬ್ಯಾನರ್‌ಗಳನ್ನು ಹಾಕುವುದು, ಮರಗಳನ್ನು ಕತ್ತರಿಸುವ ಮೂಲಕ ರಸ್ತೆ ಬಂದ್‌ ಮಾಡುವುದು ಸೇರಿದಂತೆ ಇತರ ಕೆಲಸಗಳನ್ನು ಮಾಡುತ್ತಿದ್ದರು ಎಂದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.