ಖರ್ಗೆಗೆ ಜನ್ಮದಿನದ ಸಂಭ್ರಮ: ಮೋದಿ, ರಾಹುಲ್‌ ಸೇರಿ ಗಣ್ಯರಿಂದ ಶುಭಾಶಯ ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ತಮ್ಮ 82ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, ‘ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಆಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ‘ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಜನರ ಒಳಿತಿಗಾಗಿ ನಿಮ್ಮ ದಣಿವರಿಯದ ಸೇವೆ ಮತ್ತು ಸಮರ್ಪಣೆ ಎಲ್ಲರಿಗೂ ಸ್ಫೂರ್ತಿಯಾಗಿದೆ’ ಎಂದು ರಾಹುಲ್ ಗಾಂಧಿ ತಮ್ಮ ಎಕ್ಸ್‌ ಖಾತೆಯಲ್ಲಿ ಶುಭಾಶಯ ತಿಳಿಸಿದ್ದಾರೆ. , . . @ ಮಲ್ಲಿಕಾರ್ಜುನ ಖರ್ಗೆ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶುಭಾಶಯ ಕೋರಿರುವ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರು, ರಾಜ್ಯಸಭೆಯ ಪ್ರತಿಪಕ್ಷ ನಾಯಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ಆ ಭಗವಂತ ತಮಗೆ ಹೆಚ್ಚಿನ ಆಯುರಾರೋಗ್ಯ ದಯಪಾಲಿಸಲಿ. ಇನ್ನೂ ದೀರ್ಘಕಾಲ ಜನಸೇವೆ ಮಾಡುವ ಚೈತನ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಕೇಂದ್ರ ಸಚಿವರೂ ಆಗಿರುವ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಶುಭಕೋರಿದ್ದಾರೆ. , @ ! ’ . . ../ECI1PW2QYX ನಾಳೆ 83ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ನಾಡಿನ ಧೀಮಂತ ರಾಜಕಾರಣಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ @ ಅವರನ್ನು ಭೇಟಿಯಾಗಿ, ಜನ್ಮದಿನದ ಶುಭ ಕೋರಿದೆ. ../ayxr9LnsXj ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರು, ರಾಜ್ಯಸಭೆಯ ಪ್ರತಿಪಕ್ಷ ನಾಯಕರೂ ಆಗಿರುವ ಶ್ರೀ @ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಆ ಭಗವಂತ ತಮಗೆ ಹೆಚ್ಚಿನ ಆಯುರಾರೋಗ್ಯ ದಯಪಾಲಿಸಲಿ ಹಾಗೂ ಇನ್ನೂ ದೀರ್ಘಕಾಲ ಜನಸೇವೆ ಮಾಡುವ ಚೈತನ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.