ಕೇದಾರನಾಥಕ್ಕೆ ಸಾಗುವ ದಾರಿಯಲ್ಲಿ ಗುಡ್ಡಕುಸಿತ: ಮೂವರು ಸಾವು ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಧಾಮಕ್ಕೆ ಸಾಗುವ ದಾರಿಯಲ್ಲಿ ಭಾನುವಾರ ಗುಡ್ಡಕುಸಿದು ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗೌರಿ ಕುಂಡ್‌– ಕೇದಾರನಾಥ ಮಾರ್ಗದ ಚಿರ್ಬಸಾ ಪ್ರದೇಶದ ಬಳಿ ಭಾನುವಾರ ಬೆಳಿಗ್ಗೆ 7.30ರ ಹೊತ್ತಿಗೆ ಭಾರಿ ಕಲ್ಲುಗಳಿಂದ ಕೂಡಿದ ಗುಡ್ಡ ಕುಸಿದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡ ಸ್ಥಳಕ್ಕೆ ತಲುಪಿದೆ ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಹೇಳಿದ್ದಾರೆ. ಈವರೆಗೆ ಅವಶೇಷಗಳಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಗಾಯಗೊಂಡ ಸ್ಥಿತಿಯಲ್ಲಿ ಒಬ್ಬ ವ್ಯಕ್ತಿಯನ್ನು ಹೊರತೆಗೆಯಲಾಗಿದೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. | : , . ../XZ6wSRKlw7 ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಪುಷ್ಕರ್‌ಸಿಂಗ್‌ ಧಾಮಿ, ‘ಕೇದಾರನಾಥ ಯಾತ್ರೆಯ ಮಾರ್ಗದಲ್ಲಿ ಸಂಭವಿಸಿದ ದುರಂತ ವಿಷಾದನೀಯ. ರಕ್ಷಣಾ ತಂಡ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಮೃತರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ’ ಎಂದು ಬರೆದುಕೊಂಡಿದ್ದಾರೆ. केदारनाथ यात्रा मार्ग के पास पहाड़ी से मलबा व भारी पत्थर गिरने से कुछ यात्रियों के हताहत होने का समाचार अत्यंत दुःखद है। घटनास्थल पर राहत एवं बचाव कार्य जारी है, इस सम्बन्ध में निरंतर अधिकारियों के संपर्क में हूं। हादसे में घायल हुए लोगों को त्वरित रूप से बेहतर उपचार उपलब्ध… ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.