ಹರಿಯಾಣ ವಿಧಾನಸಭೆಗೆ ಎಎಪಿ ಏಕಾಂಗಿ ಸ್ಪರ್ಧೆ: ಸಂಜಯ್‌ ಸಿಂಗ್‌ ಚಂಡೀಗಢ: ಇದೇ ವರ್ಷದ ಅಂತ್ಯದಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭೆಯ ಎಲ್ಲ 90 ಕ್ಷೇತ್ರಗಳಲ್ಲಿಯೂ ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಹಿರಿಯ ಮುಖಂಡ ಸಂಜಯ್‌ ಸಿಂಗ್‌ ಗುರುವಾರ ಹೇಳಿದ್ದಾರೆ. ಈ ಮೂಲಕ ಇಂಡಿಯಾ ಮೈತ್ರಿಕೂಟದ ಎಎಪಿ, ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವನ್ನು ನೀಡಿದ್ದಾರೆ. ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಸಿಂಗ್‌ ಹಾಗೂ ಪಕ್ಷದ ಹಿರಿಯ ಮುಖಂಡ ಸಂದೀಪ್‌ ಪಾಠಕ್‌ ಅವರೊಂದಿಗೆ ಚಂಡೀಗಢದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘೋಷಣೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷವು ಪ್ರಬಲವಾಗಿ ಹೋರಾಡಲಿದೆ ಎಂದೂ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.