ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳ ಸಭೆ; ಲೋಕಸಭೆ ಫಲಿತಾಂಶ ಪರಾಮರ್ಶೆ ಸಾಧ್ಯತೆ ನವದೆಹಲಿ: ಜುಲೈ ತಿಂಗಳ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ವರದಿ ಮಾಡಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾಗವಹಿಸಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಕುರಿತು ಪರಾಮರ್ಶೆ ನಡೆಸಲಾಗುವುದು ಎಂದು ತಿಳಿದು ಬಂದಿದೆ. ಕೇಂದ್ರ ಹಾಗೂ ರಾಜ್ಯಗಳ ನಡುವಣ ಸಮನ್ವಯ ಹಾಗೂ ಉತ್ತಮ ಆಡಳಿಯ ಕಾರ್ಯಸೂಚಿಯ ಭಾಗವಾಗಿಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ. - . , , , . … ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.