ಜೈಲಿನಲ್ಲಿದ್ದ ಬಿಆರ್‌ಎಸ್‌ ನಾಯಕಿ ಕವಿತಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆ ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿಹಾರ್‌ ಜೈಲಿನಲ್ಲಿದ್ದ ಕವಿತಾ ಅವರನ್ನು ದೆಹಲಿಯ ದೀನ್‌ ದಯಾಳ್‌ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕವಿತಾ ಅವರನ್ನು ಕಳೆದ ಮಾರ್ಚ್‌ 15ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.