ಮಣಿಪುರ: ಶಸ್ರ್ರಾಸ್ತ್ರ, ಮದ್ದು–ಗುಂಡುಗಳು ಜಪ್ತಿ ಇಂಫಾಲ್: ಮಣಿಪುರದ ಇಂಫಾಲ್‌ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಶಸ್ತ್ರಾಸ್ತ್ರ ಮತ್ತು ಮದ್ದು–ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. ‘ಇಂಫಾಲ್‌ ಪೂರ್ವ ಜಿಲ್ಲೆಯ ಹೈನ್‌ಗ್ಯಾಂಗ್‌ ಚಿಂಗ್‌ನಲ್ಲಿ ಶನಿವಾರ ಕಾರ್ಯಾಚರಣೆ ನಡೆಸಲಾಗಿದ್ದು, ಒಂದು ಎಕೆ 56 ಬಂದೂಕು, 2 ಇತರ ಬಂದೂಕುಗಳು, 3 ಪಿಸ್ತೂಲ್‌, ಎರಡು ಹ್ಯಾಂಡ್‌ ಗ್ರೆನೇಡ್‌, ಮದ್ದು–ಗುಂಡುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಮಣಿಪುರ ಪೊಲೀಸರ ಪ್ರಕಟಣೆ ತಿಳಿಸಿದೆ. ‘ಖುಯತೋಂಗ್‌ ಮತ್ತು ನಾಗಂಪಾಲ್‌ನಲ್ಲಿ ಶುಕ್ರವಾರ ನಡೆದ ಕಾರ್ಯಾಚರಣೆಯ ವೇಳೆ ಮೂರು ಬಂದೂಕುಗಳು ಮತ್ತು ಮದ್ದು–ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ‘ಇಂಫಾಲ್‌ ಪೂರ್ವ ಜಿಲ್ಲೆಯಲ್ಲಿ ಶನಿವಾರ ಕಾರ್ಯಾಚರಣೆ ನಡೆಸಿ, ಇಬ್ಬರು ಶಂಕಿತರನ್ನು ಬಂಧಿಸಲಾಗಿದ್ದು, 2 ಪಿಸ್ತೂಲ್‌ ಮತ್ತು ಜೀವಂತ ಮದ್ದು–ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.