ಠಾಣೆ: 11 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಠಾಣೆ: 11 ವರ್ಷದ ಬಾಲಕಿಯನ್ನು ಇಬ್ಬರು ಪುರುಷರು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಭಾನುವಾರ ಅಧಿಕಾರಿಗಳು ತಿಳಿಸಿದರು. ಬಾಲಕಿಯು ಜುಲೈ 12ರಂದು ಅಂಬರನಾಥ ರೈಲು ನಿಲ್ದಾಣದ ಕಡೆಗೆ ತೆರಳುತ್ತಿದ್ದ ವೇಳೆ ತಂದೆ ಹಾಗೂ ಅಜ್ಜಿ ಕಡೆಯವರು ಎಂದು ಪರಿಚಯಿಸಿಕೊಂಡ ಇಬ್ಬರು, ಅಕೆಯನ್ನು ಬೆದರಿಸಿ ಆಟೊರಿಕ್ಷಾದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಬಾಲಕಿಯು ಮನೆಗೆ ತೆರಳಿ, ನಡೆದ ಘಟನೆಯ ಬಗ್ಗೆ ಪೋಷಕರಿಗೆ ಹೇಳಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದರು. ಬಾಲಕಿಯ ಪಾಲಕರು ಅಂಬರನಾಥ ಪೋಲಿಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಹಾಗೂ ಪೋಕ್ಸೊ ಕಾಯ್ದೆಯ ಅಡಿ ಶನಿವಾರ ದೂರು ದಾಖಲಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.