| ಮುಂಬೈನಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಮುಂಬೈ: ಮುಂಬೈನಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಸುರಿದ ಭಾರಿ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿ ದಟ್ಟಣೆ ಉಂಟಾಗಿತ್ತು. ಮುಂಬೈನ ಹಲವು ಭಾಗಗಳಲ್ಲಿ ಬೆಳಿಗ್ಗೆ 7ರಿಂದ 8 ಗಂಟೆಯವರೆಗೆ 15 ಮಿ.ಮೀ ಮಳೆ ಸುರಿದಿದೆ. ಸಿಯೋನ್‌ನಂತಹ ತಗ್ಗು ಪ್ರದೇಶಗಳು ಮತ್ತು ಅಂಧೇರಿ ಸಬ್‌ವೇಯು ಜಲಾವೃತಗೊಂಡಿತ್ತು. ಹಲವಾರು ರಸ್ತೆಗಳಲ್ಲಿಯೂ ನೀರು ತುಂಬಿದ್ದರಿಂದ ವಾಹನಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿದವು. ‘ಮುಂಬೈನ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ’ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.