ರಕ್ಷಣಾ ಸಚಿವ ರಾಜನಾಥ ಸಿಂಗ್‌ಗೆ ಬೆನ್ನು ನೋವು; ಏಮ್ಸ್‌ನಲ್ಲಿ ಚಿಕಿತ್ಸೆ, ಬಿಡುಗಡೆ ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಬೆನ್ನು ನೋವಿನ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿದ್ದ ರಾಜನಾಥ ಸಿಂಗ್ ಅವರು ಗುರುವಾರ ಬೆಳಿಗ್ಗೆ ಏಮ್ಸ್‌ನ ನ್ಯೂರೋ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ದಾಖಲಾಗಿದ್ದರು. ರಾಜನಾಥ ಸಿಂಗ ಆರೋಗ್ಯವಾಗಿ ಇದ್ದಾರೆ. ಎರಡು ದಿನಗಳ ಚಿಕಿತ್ಸೆಯ ಬಳಿಕ ರಾಜನಾಥ ಸಿಂಗ್ ಅವರನ್ನು ಇಂದು ಮಧ್ಯಾಹ್ನ ಡಿಸ್‌ಚಾರ್ಜ್ ಮಾಡಲಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ವೈದ್ಯೆ ರಿಮಾ ದಾದಾ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.