ದೆಹಲಿ ಅಬಕಾರಿ ನೀತಿ ಹಗರಣ: ಕವಿತಾ ಬಂಧನ ಅವಧಿ 18ರವರೆಗೆ ವಿಸ್ತರಣೆ ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರ್ಷದ ಮಾರ್ಚ್‌ನಲ್ಲಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಬಳಿಕ ಅದೇ ಪ್ರಕರಣದಲ್ಲಿ ಏಪ್ರಿಲ್‌ನಲ್ಲಿ ಸಿಬಿಐ ಕೂಡ ಅವರನ್ನು ಬಂಧಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.